ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ-1 ಹುದ್ದೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ-1 ಹುದ್ದೆ ಹಾಗೂ ಮೂಡುಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ-1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ
ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ
Date: