Saturday, February 7, 2026
Saturday, February 7, 2026

ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಮಾ.5: ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ -2 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ/ ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ನೇಮಕಾತಿ ಮಾಡಿಕೊಳ್ಳಲು, ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ ಪದವಿ ಹಾಗೂ ಹೌಸ್‌ಮೆನ್ ಶಿಪ್ ಆಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ಕೆ.ಎಂ.ಸಿ ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಇಂಟರ್ನ್ಶಿಪ್ ಪ್ರಮಾಣ ಪತ್ರ ಗಳನ್ನು ಅರ್ಜಿ ನಮೂನೆಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ. ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮಾರ್ಚ್ 10 ರಂದು ನಡೆಯುವ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...
error: Content is protected !!