Sunday, January 19, 2025
Sunday, January 19, 2025

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ-35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅಥವಾ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!