Friday, September 20, 2024
Friday, September 20, 2024

ಕುಂದಾಪುರ, ಉಡುಪಿ- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪುರ, ಉಡುಪಿ- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಸೌತ್ ಶಾಲೆ, ಪಡುನಿಟ್ಟೂರು, ಮೂಳೂರು ಯು.ಬಿ.ಎಂ.ಸಿ, ಅಲೆವೂರು, ಕಂಪನಬೆಟ್ಟು, ಕುತ್ಯಾರು ಪಂಚಾಯತ್ ಬಳಿ, ಪಾಂಗಾಳಗುಡ್ಡೆ ಹಾಗೂ ಮಿತ್ರಬೆಟ್ಟು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!