ಉಡುಪಿ, ಜು.21: ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಸಿವಿಲ್ ಅಥವಾ ಮೆಕ್ಯಾನಿಕಲ್ ಅಥವಾ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಂದ ವೆಬ್‌ಸೈಟ್ https://ssc.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ನೊಂದಣಿಗೆ ಜುಲೈ 21 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™