Tuesday, September 8, 2026
Tuesday, September 8, 2026

ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.6: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!