Saturday, July 25, 2026
Saturday, July 25, 2026

ಕುಂದಾಪುರ: ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುಂದಾಪುರ: ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಸೆ.10: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!