Friday, January 16, 2026
Friday, January 16, 2026

ಬ್ರಹ್ಮಾವರ: ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಹ್ಮಾವರ: ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಸೆ.10: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 33 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!