Friday, January 16, 2026
Friday, January 16, 2026

ಸೆ.13- ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ: ಯಶ್ಪಾಲ್ ಸುವರ್ಣ

ಸೆ.13- ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ: ಯಶ್ಪಾಲ್ ಸುವರ್ಣ

Date:

ಉಡುಪಿ, ಸೆ.12: ಉಡುಪಿ ನಗರಸಭೆ ಮತ್ತು ಶ್ರೀ ಜ್ಞಾನಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಮಲ್ಪೆ ಇವರ ಆಶ್ರಯದಲ್ಲಿ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 13 ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಬೃಹತ್ ಉದ್ಯೋಗ ಮೇಳದ ಉದ್ಘಾಟನೆಯನ್ನು ಪೂರ್ವಾಹ್ನ 10 ಗಂಟೆಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್, ಆಸ್ಪೆನ್ ಪಡುಬಿದ್ರಿಯ ಹಿರಿಯ ಪ್ರಬಂಧಕರಾದ ಅಶೋಕ್ ಕುಮಾರ್ ಶೆಟ್ಟಿ, ಯೂನಿಯನ್ ಬ್ಯಾಂಕ್ ವಿಭಾಗೀಯ ಅಧಿಕಾರಿ ಅಶೋಕ್ ಭಾಂಡಗೆ, ಕೆನರಾ ಬ್ಯಾಂಕ್‌ ವೃತ್ತ ಕಚೇರಿ ಪ್ರಧಾನ ವ್ಯವಸ್ಥಾಪಕರಾದ ಎಚ್. ಕೆ. ಗಂಗಾಧರ್, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಆತ್ಮಾನಂದ ಸರಸ್ವತಿ ಐಟಿಐ ಬಿಲ್ಲಾಡಿ ಪ್ರಾಂಶುಪಾಲರಾದ ರೂಪೇಶ್ ಕುಮಾರ್, ಜ್ಞಾನ ಜ್ಯೋತಿ ಭಜನಾ ಮಂದಿರದ ಗೌರವಾಧ್ಯಕ್ಷರಾದ ಪಾಂಡುರಂಗ ಮಲ್ಪೆ, ಜ್ಞಾನ ಜ್ಯೋತಿ ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಜ್ಞಾನಜ್ಯೋತಿ ಭಜನಾ ಮಂದಿರದ ಅಧ್ಯಕ್ಷರಾದ ಜ್ಞಾನೇಶ್ವರ್ ಕೋಟ್ಯಾನ್‌ ಉಪಸ್ಥಿತರಿರಲಿದ್ದಾರೆ.

ಉದ್ಯೋಗ ಮೇಳದಲ್ಲಿ 60 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 2 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!