Sunday, October 18, 2026
Sunday, October 18, 2026

ಜೀವರಕ್ಷಕ ಸಿಬ್ಬಂದಿಗಳ ಹುದ್ದೆ: ಅರ್ಜಿ ಆಹ್ವಾನ

ಜೀವರಕ್ಷಕ ಸಿಬ್ಬಂದಿಗಳ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಏ.6: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್‌ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿಂದ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ಮಣಿಪಾಲ ದೂರವಾಣಿ ಸಂಖ್ಯೆ: 0820- 2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!