Wednesday, September 23, 2026
Wednesday, September 23, 2026

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.11: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು – 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ / ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಎರಡು ವರ್ಷ ಹೆಚ್ಚಿನ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ. ಸದರಿ ನೇಮಕಾತಿಯು 2027 ರ ಮಾರ್ಚ್ 31 ರ ವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ), ಸದರಿ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿ ವೇಳೆಯಲ್ಲಿ ಅಥವಾ udupijda@gmail.com or atmaudupi@gmail.com ಇ-ಮೇಲ್ ಮುಖಾಂತರ
ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 22 ರ ಸಂಜೆ 5 ಗಂಟೆಯ ಒಳಗಾಗಿ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲೆ ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿರಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನ ಪಕ್ರಿಯೆ ನಂತರ ಆಯ್ಕೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!