Monday, September 28, 2026
Monday, September 28, 2026

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

Date:

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆಗಸ್ಟ್ 19 ರಂದು ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನಿವೃತ್ತ ಸರ್ಕಾರಿ / ಖಾಸಗಿ ನೌಕರರು, ಸ್ವ-ಸಹಾಯ ಸಂಘದ ಸದಸ್ಯರು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ನಿರತರು, ಅರೆಕಾಲಿಕ ಉದ್ಯೋಗಿಗಳು, ಮಾಜಿ ವಿಮಾ ಪ್ರತಿನಿಧಿಗಳು/ ಸಲಹೆಗಾರರು, ಮಾಜಿ ಸೈನಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ನಿವೃತ್ತ ಶಿಕ್ಷಕರು, ಪಿ.ಓ.ಎಸ್.ಬಿ ಏಜೆಂಟರು ಮೊದಲಾದವರಿಗೆ ಅವಕಾಶವಿದ್ದು, ಉತ್ತಮ ಸಂವಹನ ಕೌಶಲ್ಯ ಹಾಗೂ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ, ಉಡುಪಿ ಅಂಚೆ ವಿಭಾಗ, ಉಡುಪಿ ಮೊ.ನಂ: 9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!