ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಹೆಡ್ ಕಾನ್ಸ್ಟೇಬಲ್ ಸಹಾಯಕ ವೈರ್ಲೆಸ್ ಆಪರೇಟರ್ ಹಾಗೂ ಟೆಲಿ-ಪ್ರಿಂಟರ್ ಆಪರೇಟರ್ ದೆಹಲಿ ಪೋಲಿಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗಣಿತ, ವಿಜ್ಞಾನ ವಿಷಯದೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಮೆಕ್ಯಾನಿಕ್-ಕಮ್ ಅಪರೇಟರ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಸಿಸ್ಟಮ್ ಟ್ರೇಡ್ನಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣ ಪತ್ರ ಹೊಂದಿರುವ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಜುಲೈ 29 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in, https://ssc.nic.in ಸಹಾಯವಾಣಿ ಸಂಖ್ಯೆ: 080-25502520, ಮೊ.ನಂ: 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.