Monday, October 12, 2026
Monday, October 12, 2026

ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.27: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ 5 ಬಿ.ಆರ್.ಸಿ ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಯನ್ನು ಸಮಾಲೋಚಕ ಆಧಾರದ ಮೇಲೆ ನೇಮಕ ಮಾಡಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ಅವಶ್ಯವಿರುವ ಸಂದರ್ಭ ಪ್ರಾಥಮಿಕ ಶಾಲಾ ಮಕ್ಕಳಿಗೂ ಸಹ) ಸೇವೆಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 28 ರಿಂದ 40 ವರ್ಷದೊಳಗಿನ, ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂಎ/ಎಂಎಸ್‌ಸಿ ಪದವಿ ಪಡೆದಿರುವ, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದ್ದು, ಪ್ರತಿ ಸಮಾಲೋಚಕರಿಗೆ ಮಾಸಿಕ 40,000 ಗೌರವ ಧನ ಹಾಗೂ 10,000 ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂ: 0820-2575383 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!