Tuesday, September 29, 2026
Tuesday, September 29, 2026

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ. 31: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820- 2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಜಯಂಟ್ಸ್ ಗ್ರೇಟ್ ಡೇ ಕಾರ್ಯಕ್ರಮ

ಬ್ರಹ್ಮಾವರ, ಸೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಜಯಂಟ್ಸ್ ಕೇರ್ ಫೌಂಡೇಶನ್...
error: Content is protected !!