Thursday, October 1, 2026
Thursday, October 1, 2026

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

Date:

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ, ಸಂಸ್ಥೆಗಳು ಮತ್ತು ವಿವಿಧ ಸಾಂವಿಧಾನಿಕ ಸಂಸ್ಥೆ, ಶಾಸನಬದ್ದ ಸಂಸ್ಥೆ, ನ್ಯಾಯಮಂಡಳಿ ಹಾಗೂ ಕಛೇರಿಗಳಲ್ಲಿ ಖಾಲಿ ಇರುವ ಲೋವರ್ ಡಿವಿಜಿನಲ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ಸ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ವೆಬ್‌ಸೈಟ್ https://ssc.gov.inನಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹೈಯರ್ ಸೆಕೆಂಡರಿ (10+2) ಪೂರ್ಣಗೊಳಿಸಿರಬೇಕು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಆಯ್ಕೆಯನ್ನು ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520, 25527342 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...
error: Content is protected !!