ಉಡುಪಿ, ನ.2: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ ಒಳಗಾಗಿ ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಶಾಸ್ತ್ರೀಸರ್ಕಲ್ ಕುಂದಾಪುರ ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ
ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ
Date:




By
ForthFocus™