Thursday, November 26, 2026
Thursday, November 26, 2026

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ನ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿಒ ಇಂಜಿನಿಯರ್ ಮತ್ತು ಲೆದರ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಒ ಹುದ್ದೆಗೆ ಬ್ಯಾಚುಲರ್ ಆಫ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಬಿಪಿಒ ಅಥವಾ ಡಿಪ್ಲೋಮಾ ಇನ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಡಿಪಿಒ ವಿದ್ಯಾರ್ಹತೆ ಮತ್ತು ಸದ್ರಿ ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಹಾಗೂ ಲೆದರ್‌ವರ್ಕರ್ ಹುದ್ದೆಗೆ ಲೆದರ್‌ವರ್ಕ್ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ನವೆಂಬರ್ 20 ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ-576101 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2533372, 9964583433 ಸಂಪರ್ಕಿಸಬಹುದಾಗಿದ್ದು, ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತಕ್ಕೆ ಬಾಬಾ ಸಾಹೇಬರ ಸಂವಿಧಾನವೇ ಕೈದೀವಿಗೆ

ಹಿರಿಯಡಕ, ನ.26: ಜಾತಿ, ಮತ, ಭಾಷೆ, ಬಣ್ಣಗಳಲ್ಲಿ ಬಹುರೂಪಿಯಾದ ಬಹುತ್ವಭಾರತದ ಬದುಕಿನ...

ಅರಿವಿನ ಬೆಳಕು ಉಪನ್ಯಾಸ ಮಾಲೆ- 21

ಉಡುಪಿ, ನ.25: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಶಿವರಾಮ ಕಾರಂತ...

ಜಿಲ್ಲಾ ಉಸ್ತುವಾರಿ ಸಚಿವರಿಂದ ದೃಷ್ಟಿ ಕಮಾಂಡ್ ಸೆಂಟರ್ ವೀಕ್ಷಣೆ

ಉಡುಪಿ, ನ.25: ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉಡುಪಿ...
error: Content is protected !!