Sunday, January 19, 2025
Sunday, January 19, 2025

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.inರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಗಸ್ಟ್ 20 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!