ಉಡುಪಿ: ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಚಿಸುವ 21 ರಿಂದ 35 ವಯೋಮಿತಿಯೊಳಗಿನ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ / ಯುವತಿಯರು ತಮ್ಮ ಸ್ವ ವಿವರಗಳೊಂದಿಗೆ ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಇಲ್ಲಿ ನವೆಂಬರ್ 15 ರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಸಂವಹನ ಕಲೆ, ಕೌಶಲ್ಯ ಹೊಂದಿ ಸಮುದಾಯದಲ್ಲಿ ಕೆಲಸ ಮಾಡಲು ಇಚ್ಛೆ ಉಳ್ಳವರಾಗಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇಲ್ಲಿ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರದ ದೂರವಾಣಿ ಸಂಖ್ಯೆ 0820-2533933 / 9743292051 / 9110909886 ನ್ನು ಬೆಳಿಗ್ಗೆ 10 ರಿಂದ 5 ಗಂಟೆಯ ಒಳಗೆ ಸಂಪರ್ಕಿಸಬಹುದು.