Home ಉದ್ಯೋಗಾವಕಾಶ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

340
0

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಜಿಲ್ಲೆಯ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆ ಕರಾಟೆ, ಜೂಡೋ, ಟಿಕ್ವೆಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳ 6 ತಿಂಗಳ ಅವಧಿಯ ತರಬೇತಿ ನೀಡಲು ಅಂತಾರಾಷ್ಟ್ರೀಯ ಮನ್ನಣೆ ಹೊಂದಿದ ಮಾರ್ಷಲ್ ಆರ್ಟ್ಸ್ ಗಳಲ್ಲಿ ಕನಿಷ್ಠ ಬ್ಲಾಕ್ ಬೆಲ್ಟ್ ಪೂರ್ಣಗೊಳಿಸಿರುವ ನುರಿತ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574892 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.