ಉಡುಪಿ: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿನ್ ದಿಯಾ, ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ಇಲ್ಲಿ ಜನವರಿ 24 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ಆಯೋಜಿಸಲಾಗಿದೆ. ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.