Wednesday, February 26, 2025
Wednesday, February 26, 2025

ಉಡುಪಿ, ಕುಂದಾಪುರ, ಬ್ರಹ್ಮಾವರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ಕುಂದಾಪುರ, ಬ್ರಹ್ಮಾವರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಫೆ. 27: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), ಬೊಳ್ಜೆ (ಸಾಮಾನ್ಯ), ಪಿತ್ರೋಡಿ (ಸಾಮಾನ್ಯ), ಬಬ್ಬರ್ಯಗುಡ್ಡೆ (ಸಾಮಾನ್ಯ), ಬೊಟ್ಟಲ (ಸಾಮಾನ್ಯ), ಎರ್ಮಾಳು ಬಡಾ (ಸಾಮಾನ್ಯ), ನವಶಕ್ತಿ (ಸಾಮಾನ್ಯ), ಮಹಾತ್ಮಾಗಾಂಧಿ ಶಾಲೆ (ಸಾಮಾನ್ಯ), ಎಲ್.ವಿ.ಪಿ-2 (ಸಾಮಾನ್ಯ), ಪೊಲಿಪು ಗರಡಿ (ಸಾಮಾನ್ಯ), ಕಡೆಕಾರು ಪಡುಕೆರೆ (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 19 ರಿಂದ 35 ವರ್ಷದೊಳಗಿನ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ, ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ, ಸಾಮಾನ್ಯ ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ದೂರವಾಣಿ ಸಂಖ್ಯೆ 0820-2524055 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾಪುರ: ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್ ಕಟ್ಟೆ (ಸಾಮಾನ್ಯ) ಮತ್ತು ಯಡಮೊಗೆ ಗ್ರಾಮದ ಕೊಳಾಲಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ (ಸಾಮಾನ್ಯ), ತೆಕ್ಕಟ್ಟೆ ಗ್ರಾಮ (ಸಾಮಾನ್ಯ), ತೆಕ್ಕಟ್ಟೆ ಗ್ರಾಮದ ಕೊಮೆ (ಸಾಮಾನ್ಯ), ಬೇಳೂರು ಗ್ರಾಮದ ದೇವಸ್ಥಾನಬೆಟ್ಟು (ಸಾಮಾನ್ಯ), ಹೆಸ್ಕತ್ತೂರು ಗ್ರಾಮ (ಸಾಮಾನ್ಯ), ಹರ್ಕೂರು ಗ್ರಾಮ (ಸಾಮಾನ್ಯ), ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್‌ಕಲ್ (ಸಾಮಾನ್ಯ), ವಾರ್ಡ್-3 ರ ಕರ್ನಾಟಕ ಟೈಲ್ಸ್ (ಸಾಮಾನ್ಯ), ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ (ಸಾಮಾನ್ಯ), ಅಮಾಸೆಬೈಲು ಗ್ರಾಮದ ಬಳ್ಮನೆ (ಸಾಮಾನ್ಯ), ಕುಳಂಜೆ ಗ್ರಾಮದ ಭರತ್ಕಲ್ (ಸಾಮಾನ್ಯ), ಯಡ್ತರೆ ಗ್ರಾಮದ ಕೊರಾಡಿ (ಎಸ್.ಟಿ) ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯತ್ ಹತ್ತಿರ, ಶಾಸ್ತ್ರಿ ಪಾರ್ಕ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ.

ಬ್ರಹ್ಮಾವರ: ಹಳ್ಳಿಬೈಲು (ಸಾಮಾನ್ಯ), ಹೊಸಬೆಂಗ್ರೆ (ಸಾಮಾನ್ಯ), ಕೋಟಶಾಲೆ (ಸಾಮಾನ್ಯ), ಬೆರ್ಳ್ಳಪಾಡಿ (ಸಾಮಾನ್ಯ), ಚಿಪ್ಪಿಕಟ್ಟೆ(ಸಾಮಾನ್ಯ), ತೊಟ್ಟಂ (ಸಾಮಾನ್ಯ), ಉಪ್ಪೂರು ಸಾಲ್ಮರ (ಸಾಮಾನ್ಯ), ಹರಾವು (ಸಾಮಾನ್ಯ) ಮತ್ತು ಹೇರಂಜೆ (ಸಾಮಾನ್ಯ) ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಂದಾಡಿ ಗ್ರಾಮ ಪಂಚಾಯತ್ ಹತ್ತಿರ, ಗಾಂಧಿಮೈದಾನ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!