Home ಉದ್ಯೋಗಾವಕಾಶ ಕಾರ್ಕಳ- ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಕಳ- ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

154
0

ಉಡುಪಿ, ಫೆ. 28: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.