ಉಡುಪಿ, ಮಾ. 24: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 28 ರಂದು ಬೆಳಗ್ಗೆ 10.30 ಕ್ಕೆ ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ., ಆಭರಣ ಜುವೆಲರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ, ಬಿ.ಎ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.