Home ಉದ್ಯೋಗಾವಕಾಶ ಮೇ 19: ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಮೇ 19: ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

328
0

ಉಡುಪಿ, ಮೇ 15: ಅದ್ವಿತ್ ಐ ಟೆಕ್ ಪ್ರೈ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಕಂಪನಿಗಳ ವತಿಯಿಂದ ಮೇ 19 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.