ಉಡುಪಿ, ಜೂನ್ 2: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ನಿಗಧಿತ ವಿದ್ಯಾರ್ಹತೆ ಇರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ರಜತಾದ್ರಿ, ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.