ಉಡುಪಿ, ಜೂನ್ 21: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಾಪುರ ಮತ್ತು ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಗೆ ಅರೆಕಾಲಿಕ ಸ್ವಯಂ ಸೇವಕರನ್ನು ನೇಮಕಾತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಅಥವಾ ಕುಂದಾಪುರ ಹಾಗೂ ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.