Home ಉದ್ಯೋಗಾವಕಾಶ ಉಡುಪಿ: ಕಾನೂನು ಸಲಹೆಗಾರರ ನೇಮಕಾತಿಗೆ ಅರ್ಜಿ ಆಹ್ವಾನ

ಉಡುಪಿ: ಕಾನೂನು ಸಲಹೆಗಾರರ ನೇಮಕಾತಿಗೆ ಅರ್ಜಿ ಆಹ್ವಾನ

336
0

ಉಡುಪಿ, ಜುಲೈ 15: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಹಾಗೂ ಇತರ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಸಲಹೆ ನೀಡಲು, ವಿವಿಧ ನ್ಯಾಯಾಲಯ ಪ್ರಕರಣಗಳಿಗೆ ಕಂಡಿಕೆವಾರು ಉತ್ತರಗಳನ್ನು ಸಿದ್ಧಪಡಿಸಲು ಕಾನೂನು ಸಲಹೆಗಾರರ ನೇಮಕ ಮಾಡಲು, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ನಿವೃತ್ತ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಉಪ ತಹಶೀಲ್ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಬಯೋಡಾಟಾಗಳೊಂದಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿಯ ಆಡಳಿತ ಶಾಖೆ ದೂ. ಸಂಖ್ಯೆ: 0820-2574925 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.