ಉಡುಪಿ, ಸೆ.11: ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಹೊಂದಿರುವವರು ಸೆಪ್ಟಂಬರ್ 27 ರ ಸಂಜೆ 5.30 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
ನೋಟರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ನೋಟರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
Date: