Home ಉದ್ಯೋಗಾವಕಾಶ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

549
0

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಜುಲೈ 21 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ದೂ.ಸಂಖ್ಯೆ: 0820-2574810, 2574811 ಅಥವಾ ತಾಲೂಕು ಪಂಚಾಯತ್‌ನ ಎಂ.ಆರ್.ಡಬ್ಲ್ಯೂ (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.