ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಆಗಸ್ಟ್ 4 ರಂದು ಬೆಳಗ್ಗೆ 9.30 ಕ್ಕೆ ಮಣಿಪಾಲದ ಪೆರಂಪಳ್ಳಿ ಭಾರತೀಯ ವಿಕಾಸ ಟ್ರಸ್ಟ್ನಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಆಯೋಜಿಸಲಾಗಿದ್ದು, 18 ರಿಂದ 40 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.
ಶಿಬಿರದಲ್ಲಿ ಉದ್ಯಮಶೀಲ ಗುಣಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 8217530146, 9886943717 ಅನ್ನು ಸಂಪರ್ಕಿಸುವಂತೆ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.