Sunday, September 13, 2026
Sunday, September 13, 2026

ಮಣಿಪಾಲ: ‘ಕೃಷಿ ಉದ್ಯಮಿ’ ಉಚಿತ ತರಬೇತಿ

ಮಣಿಪಾಲ: ‘ಕೃಷಿ ಉದ್ಯಮಿ’ ಉಚಿತ ತರಬೇತಿ

Date:

ಮಣಿಪಾಲ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 08/11/2021 ರಿಂದ 20/11/2021, 13 ದಿನಗಳ ‘ಕೃಷಿ ಉದ್ಯಮಿ’ ಕುರಿತಾದ ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಾವಯವ ಕೃಷಿ, ನರ್ಸರಿ ಗಿಡಗಳ ನಿರ್ವಹಣೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಕೃಷಿ, ನೀರಾವರಿ ಮುಂತಾದ ಕ್ಷೇತ್ರದ ಬಗ್ಗೆ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವಕ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿನಾಂಕ 05.11.2021 ರೊಳಗೆ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ.

ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ದೂರವಾಣಿ ಮುಖಾಂತರವೂ ತರಬೇತಿಗೆ ನೊಂದಾಯಿಸಿಕೊಳ್ಳಬಹುದು. ಗ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.

ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455, 9449862665
ವಿಳಾಸ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೆನರಾ ಬ್ಯಾಂಕ್ ಪ್ರ‍್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ-576104

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!