24 ಗಂಟೆಗಳಲ್ಲಿ ದೇಶಾದ್ಯಂತ 51,667 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,01,34,445 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 64,527 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,12,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,91,28,267 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1329 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,93,310 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 30,79,48,744 ಡೋಸ್ ಲಸಿಕೆ ನೀಡಲಾಗಿದೆ.
ಜೂನ್ 24 ರಂದು 17,35,781 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 39,95,68,448 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.