Sunday, July 26, 2026
Sunday, July 26, 2026

ಕಬಾಬ್ ಗೆ ಹೆಚ್ಚುವರಿ ದರ- ತಂಡದಿಂದ ಹಲ್ಲೆ

ಕಬಾಬ್ ಗೆ ಹೆಚ್ಚುವರಿ ದರ- ತಂಡದಿಂದ ಹಲ್ಲೆ

Date:

ಉಪ್ಪಿನಂಗಡಿ: ಫಾಸ್ಟ್ ಫುಡ್ ಗಾಡಿಯಲ್ಲಿ ಕಬಾಬ್ ಒಂದಕ್ಕೆ ಇಪ್ಪತ್ತು ರೂಪಾಯಿ ಹೆಚ್ಚು ದರ ವಿಧಿಸಿದರೆಂಬ ಕಾರಣದಿಂದ ತಂಡವೊಂದು ಫಾಸ್ಟ್ ಫುಡ್ ಸೇವೆ ನೀಡುತ್ತಿದ್ದ ಮಹಮ್ಮದ್ ಬಾತಿಷಾ ಎಂಬವರಿಗೆ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ.

ಹೆದ್ದಾರಿ ಬದಿಯ ಫಾಸ್ಟ್ ಫುಡ್ ಗಾಡಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೆಕ್ಕಿಲಾಡಿ ಆದರ್ಶನಗರದ ನಿವಾಸಿಯಾಗಿರುವ ಮಹಮ್ಮದ್ ಬಾತಿಷಾ ಎಂಬವರ ಮೇಲೆ ರಿಡ್ಜ್ ಹಾಗೂ ಇನೋವಾ ಕಾರಿನಲ್ಲಿ ಬಂದ ಅಪರಿಚಿತರು ಚಿಕನ್ ಕಬಾಬ್ ಗೆ ಇಪ್ಪತ್ತು ರೂಪಾಯಿ ಹೆಚ್ಚು ದರ ವಸೂಲಿ ಮಾಡಲಾಗಿದೆ ಎಂದು ಆರೋಪಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!