ಉಡುಪಿ: ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಆಕೆಯ ಪತಿ ರಾಮಕೃಷ್ಣ ಗಾಣಿಗ ಮತ್ತು ಪ್ರಕರಣದಲ್ಲಿ ಭಾಗಿಯಾದ ಸುಪಾರಿ ಹಂತಕನನ್ನು ಬಂಧಿಸಿದ್ದಾರೆ.

ಬ್ರಹ್ಮಾವರದ ಉಪ್ಪಿನಕೋಟೆ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಿಶಾಲ ಗಾಣಿಗ ಕೊಲೆ ನಡೆದಿತ್ತು.
ಕೆಲವೇ ದಿನಗಳಲ್ಲಿ ಕೊಲೆ ಪ್ರಕರಣವನ್ನು ಬೇಧಿಸಿದ ಉಡುಪಿ ಪೊಲೀಸರು, ಸೋಮವಾರ ಬಂಧಿಸಲ್ಪಟ್ಟ ವಿಶಾಲರವರ ಪತಿಯನ್ನು ಮಂಗಳವಾರ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.




By
ForthFocus™